Breaking
25 Sep 2026, Fri

13 ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಪತ್ತೆ

ಉಡುಪಿ: 13 ವರ್ಷಗಳ ಹಿಂದೆ ಮನೆಯಿಂದ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಕಾಣೆಯಾಗಿದ್ದ ವ್ಯಕ್ತಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ.

ಪತ್ತೆಯಾಗಿರುವವರು ಕಾರ್ಕಳದ ಪ್ರಭಾಕರ ಪ್ರಭು ಎಂಬವರ ಮಗ ಅನಂತ ಕೃಷ್ಣ ಪ್ರಭು ಎಂದು ಗುರುತಿಸಲಾಗಿದೆ. ಇವರು ಮನೆಯಿಂದ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿ ವಾಪಾಸ್ಸು ಮನೆಗೆ ಬಾರದೆ ಕಾಣೆಯಾಗಿದ್ದನು. ಈ ಬಗ್ಗೆ ಅವರ ತಂದೆ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅನೇಕ ವರ್ಷಗಳ ಕಾಲ ಯಾವುದೇ ಸುಳಿವಿಲ್ಲದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಇದೀಗ ತನಿಖಾ ತಂಡ ಈತನನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *