ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಬೆಂಗಾವಲುರವರ ವಾಹನ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಪೂಜಿ ನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶರಣಗೌಡ ಎಂದು ಗುರುತಿಸಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಶರಣಗೌಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಶರಣಗೌಡ ಕಳೆದ ಎರಡೂವರೆ ವರ್ಷದಿಂದ ಅಶೋಕ ಅವರ ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದರು ಹಾಗೂ ಅವರ ಪತ್ನಿ ಶೈಲಶ್ರೀ ಅವರು ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಶರಣಗೌಡ ಅವರಿಗೆ ಎರಡು ಹೆಣ್ಣ ಮಕ್ಕಳು ಇದ್ದಾರೆ.

ಮರಣೋತ್ತರ ಪರೀಕ್ಷೆ ನಡೆಸಲು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.



