Breaking
23 Jun 2026, Tue

ಉಡುಪಿ: ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ಪೊಲೀಸರ ದಾಳಿ: ವಾಹನ ಮತ್ತು ಮರಳು ವಶ

ಉಡುಪಿ: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಅ. 8ರಂದು ಕೋಟದ ನಂಚಾರು ಗ್ರಾಮದ ಚೀನಿಬೆಟ್ಟು ಚೌಂಡಾಲ ಸೀತಾನದಿ ಹೊಳೆಯಲ್ಲಿ ನಡೆದಿದೆ.

ಮರಳುಗಾರಿಕೆ ನಡೆಯುತ್ತಿದ್ದ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಒಂದು ಪಿಕ್‌ಅಪ್ ವಾಹನ ಹಾಗೂ ಸುಮಾರು ₹5,000 ಮೌಲ್ಯದ ಮರಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಮರಳುಗಾರಿಕೆ ನಡೆಸುತ್ತಿದ್ದ ಗಣೇಶ್ ಶೆಟ್ಟಿ ನಂಚಾರು ಮತ್ತು ಚೇತನ ನಾಯ್ಕ ಎಂಬವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *