Breaking
23 Mar 2026, Mon

ಲಾರಿ – ಬಸ್ ನಡುವೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಮೈಸೂರು: ಸಿಮೆಂಟ್ ಲಾರಿ ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಕೊಡಗು ಹೆದ್ದಾರಿಯಲ್ಲಿ ನಡೆದಿದೆ.

ಮೈಸೂರಿನಿಂದ ಕೇರಳ ಕಡೆಗೆ ತೆರಳುತ್ತಿದ್ದ ಲಾರಿಗೆ, ಕೇರಳದಿಂದ ಮೈಸೂರಿನ ಕಡೆ ಬರುತ್ತಿದ್ದ ಬಸ್ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸಿಮೆಂಟ್ ಲಾರಿ ಪಲ್ಟಿಯಾಗಿದೆ. ಈ ವೇಳೆ ಬಸ್ ಚಾಲಕ ಹಾಗೂ ಕ್ಲೀನರ್ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸದ್ಯ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೊಳಗಾದ ಎರಡೂ ವಾಹನಗಳು ಕೇರಳ ಮೂಲದ್ದಾಗಿದೆ ಎನ್ನಲಾಗಿದೆ.

ಈ ಬಗ್ಗೆ ಬಿಳಿಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *