ಉಡುಪಿ: ಬ್ಯೂಟಿ ಪಾರ್ಲರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಉಡುಪಿಯ ಕೋರ್ಟ್ ಮುಂಭಾಗ ನಡೆದಿದೆ.

ಕೋಟ್ ಮುಂಭಾಗ ಇರುವ ಮಾಂಡವಿ ಬಿಲ್ಡಿಂಗ್ ನ ಎರಡನೇ ಮಹಡಿಯಲ್ಲಿರುವ ಬ್ಯೂಟಿ ಪಾರ್ಲರ್ ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷಾಂತ ರೂಪಾಯಿ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.


ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.




