Breaking
19 Sep 2026, Sat

ಸುಳ್ಯದಲ್ಲಿ ಮಿನಿ ಟೆಂಪೋ, ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

ಸುಳ್ಯ : ಬುಲೆಟ್ ಬೈಕ್ ಮತ್ತು ಮಿನಿ ಟೆಂಪೋ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನಪ್ಪಿದ ಘಟನೆ ಅ.10 ರಂದು ನಡೆದಿದೆ.

ಮೃತರನ್ನು ಕೇರಳ ಕಲ್ಲಪಳ್ಳಿಯ ಮೂಲೆಹಿತ್ಲು ನಿವಾಸಿ ಪ್ರದೀಪ್ (40) ಎಂದು ಗುರುತಿಸಲಾಗಿದೆ.

ಸುಳ್ಯದಿಂದ ಕೇರಳ ಕಲ್ಲಪಳ್ಳಿ ಕಡೆಗೆ ಹೋಗುತ್ತಿದ್ದ ಬುಲೆಟ್ ಬೈಕ್ ಹಾಗೂ ಸುಳ್ಯ ಕಡೆಗೆ ಬರುತ್ತಿದ್ದ ಮಿನಿ ಟೆಂಪೋ ದ ನಡುವೆ ಸುಳ್ಯ-ಆಲೆಟ್ಟಿ ರಸ್ತೆಯ ನಾಗಪಟ್ಟಣ ಸೇತುವೆ ಬಳಿ ಮುಖಾಮುಖಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಬುಲೆಟ್ ಸವಾರ ಪ್ರದೀಪ್ ಅವರನ್ನು ಸುಳ್ಯದ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾದರೂ ಅದಾಗಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *