Breaking
10 May 2026, Sun

ವೈಟ್ ಲಿಫ್ಟಿಂಗ್ ಸ್ಪರ್ಧೆ 2025-26 : ಕು. ಧನ್ಯಶ್ರೀ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾರ್ಕಳ: ರಾಜ್ಯ ಮಟ್ಟದ 17 ವಯೋಮಿತಿಯ ಪ್ರೌಢಶಾಲಾ ಬಾಲಕ/ಬಾಲಕಿಯರ ವೈಟ್ ಲಿಫ್ಟಿಂಗ್ ಸ್ಪರ್ಧೆ 2025-26 ರಲ್ಲಿ ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಕನ್ನಡ ಮಾಧ್ಯಮ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ಕು. ಧನ್ಯಶ್ರೀ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಧಾರವಾಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಹರ ವಲಯ ಹುಬ್ಬಳ್ಳಿ, ವೇಮನ ವಿದ್ಯಾವರ್ಧಕ ಸಂಘದ ಪ್ರೌಢಶಾಲೆ ಹಾಗೂ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಸ್ಪರ್ಧೆಯಲ್ಲಿ 48 ಕೆಜಿ ವಿಭಾಗದಲ್ಲಿ ಇವರು ವಿಜೇತರಾಗಿದ್ದಾರೆ.

9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನ್ಯಶ್ರೀ ದುರ್ಗ ಗ್ರಾಮದ ಸವಿತಾ ನಾಯ್ಕ್ ಮತ್ತು ಸಂತೋಷ್ ನಾಯ್ಕ್ ಅವರ ಸುಪುತ್ರಿಯಾಗಿರುತ್ತಾರೆ.

Leave a Reply

Your email address will not be published. Required fields are marked *