Breaking
10 May 2026, Sun

ಬೆಂಗಳೂರಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬೆಂಗಳೂರು: ಮಹಿಳೆಯೋರ್ವರು ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತರನ್ನು ವಿಜಯಲಕ್ಷ್ಮಿ(27) ಮತ್ತು ಅವರ ಮಗ ಭುವನ್(1) ಹಾಗೂ ಮಗಳು ಬೃಂದಾ(4) ಎಂದು ಗುರುತಿಸಲಾಗಿದೆ.

ವಿಜಯಲಕ್ಷ್ಮಿ ಮತ್ತು ಅವರ ಪತಿ ರಮೇಶ್ ಮೂಲತಃ ರಾಯಚೂರು ಜಿಲ್ಲೆಯ ಮಸ್ಕಿಯವರಾಗಿದ್ದು, ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಗಂಡ ರಮೇಶ್ ಇಲ್ಲದ ಸಮಯದಲ್ಲಿ ಪತ್ನಿ ವಿಜಯಲಕ್ಷ್ಮೀ ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿಜಯಲಕ್ಷ್ಮೀ ಪತಿ ರಮೇಶ್ ಮಾಲ್ ನಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಆತ ಬೇರೆ ಮದುವೆಯಾಗಿದ್ದ. ಹೀಗಾಗಿ ವಿಜಯಲಕ್ಷ್ಮಿಗೆ ಡಿವೋರ್ಸ್ ಕೊಡುವಂತೆ ಬೆದರಿಕೆ ಹಾಕುತ್ತಿದ್ದ, ಮನೆಯಲ್ಲಿದ್ದಾಗ ಬೇರೆ ಬೇರೆ ಹುಡುಗಿಯರ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದ. ಇದರಿಂದ ಮಾನಸಿಕವಾಗಿ ನೊಂದಿದ್ದ ವಿಜಯಲಕ್ಷ್ಮೀ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಬಗ್ಗೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *