ಬಂಟ್ವಾಳ: ಯುವ ಕಾಂಗ್ರೆಸ್ ಬಂಟ್ವಾಳ ವಿಧಾನಸಭಾ ಸಮಿತಿ, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಸಮಿತಿ ವತಿಯಿಂದ ಮತಗಳ್ಳತನ ವಿರುದ್ಧ ಜಾಗೃತಿಗಾಗಿ ಬೃಹತ್ ಪಂಜಿನ ಮೆರವಣಿಗೆ ಅ.10ರ ಸಂಜೆ ನಡೆಯಿತು.

ಕೈಕಂಬದಿಂದ ಬಿ. ಸಿ ರೋಡ್ ನವರೆಗೆ ನಡೆದ ಈ ಜಾಥಕ್ಕೆ ಮಾಜಿ ಸಚಿವ ರಮಾನಾಥ ರೈ ಅವರು ಚಾಲನೆ ನೀಡಿದರು.
ಬಳಿಕ ಮಿನಿವಿಧಾನ ಸೌಧದ ಮುಂಭಾಗದಲ್ಲಿ ನಡೆದ ಸಭಾ ಕಾರ್ಯಕ್ರಮ ಉದ್ದೇಶಿಸಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಪಕ್ಷದ ಹಲವು ನಾಯಕರುಗಳು ಮಾತನಾಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರ, ಕಾರ್ಯದರ್ಶಿ ಮಹಮ್ಮದ್ ಎಂ. ಎಸ್., ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ರಾದ ವಿನಯ ಕುಮಾರ್ ಸಿಂಧ್ಯಾ, ಪ್ರಜ್ವಲ್ ಶೆಟ್ಟಿ ಪುರಸಭಾಧ್ಯಕ್ಷಬಿ. ವಾಸು ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾ। ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಝ್, ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಿಯೂಸ್ ಎಲ್. ರೋಡ್ರಿಗಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಐಡಾ ಸುರೇಶ್, ಲವಿನಾ ವಿಲ್ಮಾ ಮೊರಾಸ್, ಜಿ.ಪಂ. ಮಾಜಿ ಸದಸ್ಯ ಬಿ. ಪದ್ಮಶೇಖರ್ ಜೈನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




