Breaking
23 Mar 2026, Mon

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ನಿಂದ ಗುಜಿರಿ ಅಂಗಡಿಗೆ ತಗುಲಿದ ಬೆಂಕಿ: ಲಕ್ಷಾಂತರ ರೂ. ನಷ್ಟ

ಉಳ್ಳಾಲ: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ನಿಂದ ಗುಜಿರಿ ಅಂಗಡಿಗೆ ಬೆಂಕಿ ತಗುಲಿದ ಘಟನೆ ತಲಪಾಡಿ ಕೆ.ಸಿ. ರೋಡ್ ಬಳಿಯ ಉಚ್ಚಿಲದಲ್ಲಿ ನಡೆದಿದೆ.

ಅಂಗಡಿಯಲ್ಲಿ ದಾಸ್ತಾನು ಇರಿಸಿದ್ದ ಗುಜಿರಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿ ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ತಿಳಿದುಬಂದಿದೆ. ಈ ಅವಘಡದಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ.

ಬೆಂಕಿ ಕಾಣಿಸಿಕೊಂಡ ಸ್ಥಳದ ಸಮೀಪದಲ್ಲೇ ಪೆಟ್ರೋಲ್ ಬಂಕ್, ಶಾಲೆ ಮತ್ತು ಮನೆಗಳು ಇದ್ದರೂ ಅಗ್ನಿಶಾಮಕ ದಳದವರು ಸಕಾಲದಲ್ಲಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿ ಅನಾಹುತ ತಪ್ಪಿಸಿದರು. ಅಗ್ನಿ ಶಾಮಕ ಸಿಬ್ಬಂದಿಯ ಕಾರ್ಯಾಚರಣೆಗೆ ಸ್ಥಳೀಯರು ಸಹಕಾರ ನೀಡಿದರು.

Leave a Reply

Your email address will not be published. Required fields are marked *