Breaking
23 Mar 2026, Mon

ಬಂಟ್ವಾಳದಲ್ಲಿ ಗಾಂಜಾ ಸಾಗಾಟ: ಇಬ್ಬರು ಆರೋಪಿಗಳು ಅರೆಸ್ಟ್

ಬಂಟ್ವಾಳ: ಬೈಕ್‌ನಲ್ಲಿ ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಫರಂಗಿಪೇಟೆಯ ಮೊಹಮ್ಮದ್ ಅಜರುದ್ದೀನ್ ಮತ್ತು ಅಮ್ಮೆಮಾರ್‌ನ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದ್ದು, ಇವರಿಂದ 10 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಬೊಲೆರೊ ವಾಹನದಲ್ಲಿ ಗಾಂಜಾ ಸಾಗಿಸುವಾಗ ಅಬಕಾರಿ ಅಧಿಕಾರಿಗಳಿಂದ ತಪ್ಪಿಸಿಕೊಂಡಿದ್ದ ಈ ಇಬ್ಬರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಹೆಚ್ಚುವರಿ ಎಸ್‌ಪಿ ಅನಿಲ್ ಕುಮಾರ್ ಬೂಮರೆಡ್ಡಿ ಮಾರ್ಗದರ್ಶನದಲ್ಲಿ ಬಂಟ್ವಾಳ ಡಿವೈಎಸ್‌ಪಿ ಎಸ್. ವಿಜಯಪ್ರಸಾದ್ ಅವರ ಸೂಚನೆಯಂತೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

ಬಂಟ್ವಾಳ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಅನಂತಪದ್ಮನಾಭ ಅವರ ನೇತೃತ್ವದಲ್ಲಿ ನಡೆದ ಈ ಕಾಯ೯ಚರಣೆಯಲ್ಲಿ ಪಿಎಸ್‌ಐಗಳಾದ ಸಂದೀಪ್ ಕುಮಾರ್ ಶೆಟ್ಟಿ ಮತ್ತು ದುರ್ಗಪ್ಪ, ಎಎಸ್‌ಐಗಳಾದ ನಾರಾಯಣ ಮತ್ತು ನವೀನ್ ಕುಮಾರ್, ಹಾಗೂ ಇತರೆ ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *