Breaking
25 Jun 2026, Thu

ಸಿಗರೇಟಿನೊಳಗೆ ಗಾಂಜಾ ತುಂಬಿಸಿ ಸೇವನೆ: ಓವ೯ ಪೊಲೀಸ್ ವಶಕ್ಕೆ

ಮಂಗಳೂರು : ಸಿಗರೇಟಿನೊಳಗೆ ಗಾಂಜಾ ತುಂಬಿಸಿ ಸೇದುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೋವ೯ನನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಕೋಡಿಕಲ್ ಕಲ್ಬಾವಿ ರಸ್ತೆಯ ನಿವಾಸಿ ಗಿರೀಶ್ ಕೆ. (24) ಎಂದು ಗುರುತಿಸಲಾಗಿದೆ.

ಪೊಲೀಸರು ಗಸ್ತು ನಿರತರಾಗಿದ್ದ ವೇಳೆ ನಗರದ ಬಿಜೈ ಆನೆಗುಂಡಿಯ ಸಾರ್ವಜನಿಕ ರಸ್ತೆಯಲ್ಲಿ ಆರೋಪಿ ಗಿರೀಶ್ ಸಿಗರೇಟ್ ಸೇದುತ್ತಿದ್ದು, ಸಂಶಯದ ಮೇರೆಗೆ ಆತನನ್ನು ವಿಚಾರಣೆಗೊಳಪಡಿಸಿದಾಗ ಮಾದಕ ವಸ್ತುವನ್ನು ಸಿಗರೇಟಿನೊಳಗೆ ತುಂಬಿಸಿ ಸೇದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಗಾಂಜಾ ಸೇವನೆ ದೃಢ ಪಟ್ಟಿದ್ದು, ಅದರಂತೆ ಆರೋಪಿಯ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *