Breaking
25 Sep 2026, Fri

ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

ಚಿಕ್ಕಮಗಳೂರು: ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಚಾಕು ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ.

ಹತ್ಯೆಯಾದ ಮಹಿಳೆಯನ್ನು ನೇತ್ರಾ (32) ಎಂದು ಗುರುತಿಸಲಾಗಿದೆ.

ಐದು ತಿಂಗಳ ಹಿಂದೆ ಅವರು ಮದುವೆಯಾಗಿದ್ದರು. ಮೂರು ತಿಂಗಳ ಹಿಂದೆ ನೇತ್ರಾ ಪತಿಯೊಂದಿಗೆ ಜಗಳವಾಡಿ ತವರು ಮನೆಗೆ ಸೇರಿದ್ದಳು. ಆಕೆಯ ತವರು ಮನೆಗೆ ಹೋಗಿ ಪತಿ ನವೀನ್ ಚಾಕುವಿನಿಂದ ಆಕೆಯನ್ನು ಕೊಲೆಮಾಡಿದ್ದಾನೆ ಎನ್ನಲಾಗಿದೆ.

ಗಂಭೀರ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಈ ಕುರಿತು ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *