Breaking
23 Mar 2026, Mon

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ : ಇಡಿ ಅಧಿಕಾರಿಗಳಿಂದ ದಾಳಿ

ಚೆನ್ನೈ: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಚೆನ್ನೈನ 7 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು ಔಷಧ ನಿಯಂತ್ರಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಬಂಧಿಸಿದ 7 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಳಪೆ ಮೂಲಸೌಕರ್ಯ ಮತ್ತು ಪುನರಾವರ್ತಿತ ಸುರಕ್ಷತಾ ಉಲ್ಲಂಘನೆಗಳ ಹೊರತಾಗಿಯೂ ಶ್ರೇಸನ್ 2011ರಲ್ಲಿ ಪರವಾನಿಗೆ ಪಡೆದಾಗಿನಿಂದ ಅನಿಯಂತ್ರಿತವಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿತ್ತು. ಹೀಗಾಗಿ ಇಡಿ ಅಧಿಕಾರಿಗಳು ಚೆನ್ನೈನ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಸದ್ಯ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *