Breaking
24 Jun 2026, Wed

ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಕುಂದಾಪುರ: ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಎಗರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕೊರಚರಕೇರಿಯ ಸಂಜಯ್‌ ಎಲ್‌.(33) ಹಾಗೂ ದಾವಣಗೆರೆಯ ವಿನೋಬ ನಗರದ ವಸಂತ ಕುಮಾರ್‌( 30) ಎಂದು ಗುರುತಿಸಲಾಗಿದೆ.

ಮೀನಾಕ್ಷಿ ಎಂಬವರು ತನ್ನ ಮಗಳೊಂದಿಗೆ ಅ.3ರಂದು ಸಂಜೆ ಕುಂದಾಪುರ ಕೆಎಸ್ ಆರ್‌ ಟಿಸಿ ಬಸ್‌ ನಿಲ್ದಾಣದಿಂದ ಶಾಸ್ತ್ರಿ ಪಾರ್ಕ್ ಕಡೆಗೆ ಸರ್ವಿಸ್‌ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಬಿ.ಎಸ್.‌ಎನ್.ಎಲ್‌ ಕಚೇರಿ ಹತ್ತಿರ ಹಿಂದಿನಿಂದ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಪರಾರಿಯಾಗಿದ್ದರು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳ ಕುರಿತಾಗಿ ಕುಂದಾಪುರ ಠಾಣೆಯ ಪ್ರಭಾರ ಪೊಲೀಸ್‌ ನಿರೀಕ್ಷಕ ಜಯರಾಮ ಡಿ. ಗೌಡ, ಮಾಹಿತಿಗಳನ್ನು ಕಲೆ ಹಾಕಿ, ದಾವಣಗೆರೆ ಜಿಲ್ಲೆಯ ಮಲೆ ಬೆನ್ನೂರು ಎಂಬಲ್ಲಿ ಆರೋಪಿಗಳನ್ನು ಸೆರೆ ಹಿಡಿದು 3 ಲಕ್ಷ ರೂ. ಮೌಲ್ಯದ ಚಿನ್ನದ ಕರಿಮಣಿ ಸರ ಹಾಗೂ 8,20,000ರೂ. ಮೌಲ್ಯದ ಕಾರು ಮತ್ತು ಬೈಕ್ ಗಳನ್ನು ವಶ ಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *