Breaking
23 Mar 2026, Mon

ಹಿರಿಯ ರಂಗಭೂಮಿ ಕಲಾವಿದ, ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ಇನ್ನಿಲ್ಲ!

ಉಡುಪಿ: ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟೆ (59) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿಜಯಪುರದ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ರಾಜು ತಾಳಿಕೋಟೆ ಅವರು, ಕುಡುಕನ ಪಾತ್ರಗಳ ಮೂಲಕ ಮನೆಮಾತಾಗಿದ್ದರು.

ರಾಜು ತಾಳಿಕೋಟೆ ಅವರಿಗೆ, ಉಡುಪಿಯಲ್ಲಿ ಸಿನಿಮಾವೊಂದರ ಚಿತ್ರೀಕರಣದ ಸಂದರ್ಭ ಹಾರ್ಟ್ ಅಟ್ಯಾಕ್ ಆಗಿದ್ದು, ಕೂಡಲೇ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಅದಾಗಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ವೃತ್ತಿ ರಂಗಭೂಮಿ ಮೂಲಕ ಸಿನಿಮಾ ರಂಗಕ್ಕೆ ರಾಜು ತಾಳಿಕೋಟೆ ಎಂಟ್ರಿ ಕೊಟ್ಟಿದ್ದರು. ರಾಜು ತಾಳಿಕೋಟೆ ಅವರು ಮನಸಾರೆ, ಪಂಚರಂಗಿ, ಮತ್ತೊಂದು ಮದುವೆನಾ, ಮೈನಾ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇವರ ಅಗಲುವಿಕೆಗೆ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *