ಉಡುಪಿ: ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಕಾರ್ಖಾನೆಯ ಮಾಲಿಕರೊಬ್ಬರು ಮೃತಪಟ್ಟ ಘಟನೆ ಉಡುಪಿಯ ಬೈಲೂರಿನಲ್ಲಿ ಅ. 13 ರಂದು ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಸುನಿತಾ ಹೊಲೋ ಬ್ಲಾಕ್ ಫ್ಯಾಕ್ಟರಿಯ ಮಾಲೀಕ ಸುನಿಲ್ ಸೋನ್ಸ್ (45) ಎಂದು ಗುರುತಿಸಲಾಗಿದೆ.

ಕಳೆದ 22 ವರ್ಷಗಳಿಂದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅವರು ದಿನನಿತ್ಯದ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿದೆ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಪತ್ನಿ, ಮಗ ಮತ್ತು ಇತರ ಸಂಬಂಧಿಕರನ್ನು ಅಗಲಿದ್ದಾರೆ.


