Breaking
23 Mar 2026, Mon

ಹುಡುಗಿ ನೋಡುವ ನೆಪದಲ್ಲಿ ₹44.80 ಲಕ್ಷ ವಂಚನೆ: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ: ಹುಡುಗಿ ನೋಡುವ ವಿಚಾರದಲ್ಲಿ ಕೇರಳ ನಿವಾಸಿ ಮುಹಮ್ಮದ್ ಅಶ್ರಫ್ ತಾವರಕಡನ್(53) ಅವರ ಫೋಟೋ, ವೀಡಿಯೋ ತೆಗೆದು ಬೆದರಿಕೆ ಒಡ್ಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಮ್ಮದ್‌ ಅಶ್ರಫ್‌ ಅವರು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದರು. ಮದುವೆಯ ಸಲುವಾಗಿ 2024 ರ ಸೆಪ್ಟೆಂಬರ್‌ ನಲ್ಲಿ ಮಂಗಳೂರಿಗೆ ಬಂದ ಸಂದರ್ಭದಲ್ಲಿ ಬಶೀರ್, ಸಫಿಯಾ ಮತ್ತು ಇತರ ಆರೋಪಿಗಳು ಅವರನ್ನು ಮಂಗಳೂರಿಗೆ ಕರೆಸಿ ಫೋಟೋ ವಿಡಿಯೋ ತೆಗೆದು ಬಳಿಕ ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ 44.80 ಲಕ್ಷ ರೂಪಾಯಿ ಹಣ ವಂಚಿಸಿರುವುದು ತಿಳಿದುಬಂದಿದೆ.

ಈ ಕುರಿತು ಮಹಮ್ಮದ್‌ ಅಶ್ರಫ್‌ ಅವರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *