Breaking
23 Mar 2026, Mon

ಕಾಸರಗೋಡಿನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ಆರೋಪ : ಇಬ್ಬರು ಪೊಲೀಸ್‌ ವಶಕ್ಕೆ

ಕಾಸರಗೋಡು: ವಿದ್ಯಾರ್ಥಿನಿಯರನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ತ್ನಿಸಿದ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಉದ್ಯಾವರ ಜಮಾಲುದ್ದೀನ್ ಫೈಝಲ್ ( 39) ಮತ್ತು ಹೊಸಬೆಟ್ಟು ವಿನ ರಾಫಿಲ್ (45) ಎಂದು ಗುರುತಿಸಲಾಗಿದೆ.

ಮಂಜೇಶ್ವರ ಗೋವಿಂದ ಪೈ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿ ಕಾರಿನಲ್ಲಿ ಬಂದ ಆರೋಪಿಗಳು ಮೊಬೈಲ್ ನಂಬರ್ ಗಳನ್ನು ನೀಡುವಂತೆ ಕಿರುಕುಳ ಕೊಟ್ಟಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಂಜೇಶ್ವರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *