ಉಡುಪಿ: ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಪಟ್ಟ ಮತ್ತು ವಾರಿಸುದಾರರಿಲ್ಲದ 25 ದ್ವಿಚಕ್ರ ವಾಹನಗಳನ್ನು ಹರಾಜು ಹಾಕುವ ಪ್ರಕ್ರಿಯೆ ಅ.21ರಂದು ನಡೆಯಲಿದೆ.

ಬೆಳಗ್ಗೆ 10 ಗಂಟೆ ಸುಮಾರಿಗೆ ಮಣಿಪಾಲ ಪೊಲೀಸ್ ಠಾಣಾ ಆವರಣದಲ್ಲಿ ನ್ಯಾಯಾಲಯದ ಆದೇಶದಂತೆ ಬಹಿರಂಗ ಹರಾಜು ಮಾಡಲಾಗುತ್ತಿದೆ.
ಆಸಕ್ತರು ಆ ಸಮಯದಲ್ಲಿ ಠಾಣೆಯ ಆವರಣದಲ್ಲಿ ಹಾಜರಿರುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಣಿಪಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.




