ಮೂಡುಬಿದಿರೆ: ಪೊಲೀಸ್ ಇನ್‌ಸ್ಪೆಕ್ಟರ್‌ವೊಬ್ಬರ ಸಮಯಪ್ರಜ್ಞೆಯಿಂದ ಸಾಮೂಹಿಕ ಅತ್ಯಾಚಾರ ತಪ್ಪಿದ್ದು ನಾಲ್ವರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಮೂಡಬಿದ್ರೆಯಲ್ಲಿ ನಡೆದಿದೆ.

ಮೂಡುಬಿದಿರೆ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಣೆ ಮಾಡಿದ ಅಧಿಕಾರಿಯಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಲೂಕಿನ ನಿಡ್ಡೋಡಿ ಗ್ರಾಮದ ಮನೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ಇದ್ದ ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ಞೇಶ್, ದಿಲೀಪ್ ಹಾಗೂ ಶ್ರೀಕಾಂತ್ ಎಂಬವರನ್ನು ಬಂಧಿಸಲಾಗಿದೆ.

ಸಂತ್ರಸ್ತ ಬಾಲಕಿಯರು ಮತ್ತು ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ ಸಾಮೂಹಿಕ ಅತ್ಯಾಚಾರಕ್ಕೆ ಸಿದ್ಧತೆ ನಡೆಸುತ್ತಿದ್ದರು ಎನ್ನುವುದು ಪೊಲೀಸರ ವಿಚಾರಣೆಯಲ್ಲಿ ಗೊತ್ತಾಗಿದೆ. ಅಲ್ಲದೆ, ಸ್ಥಳದಲ್ಲಿ ಲೈಂಗಿಕ ಕ್ರಿಯೆಗೆ ಬಳಸುವ ಕೆಲವು ವಸ್ತುಗಳು ಸಹ ಪತ್ತೆಯಾಗಿವೆ. ಘಟನೆಯ ಎಲ್ಲ ವಿವರಗಳನ್ನು ಅವರು ಬಾಯಿಬಿಟ್ಟಿದ್ದಾರೆ.
ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.



