ವಿಮಾನದಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಾಟ : ಆರೋಪಿ ಅರೆಸ್ಟ್‌

ಮಂಗಳೂರು: ಮುಂಬೈನಿಂದ ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಶಂಕರ್ ನಾರಾಯಣ್ ಪೊದ್ದಾರ್ ಬಂಧಿತ ಆರೋಪಿ.

ಈತ ಅ.13ರ ಸಂಜೆ 6:30ಕ್ಕೆ ಮುಂಬೈನಿಂದ ಮಂಗಳೂರಿಗೆ ಬಂದ ಇಂಡಿಗೋ‌ ವಿಮಾನದಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ‌ ಬಂದ ಹಿನ್ನೆಲೆ ವಿಮಾನ‌ ನಿಲ್ದಾಣದ ಭದ್ರತಾ ಸಿಬ್ಬಂದಿ‌ ಸಿಐಎಸ್ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು . ಅದರಂತೆ ಸಂಜೆ ಇಂಡಿಗೋ ವಿಮಾನದಲ್ಲಿ ಬಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ‌ ಇಳಿಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಪರಿಶೀಲನೆ‌‌ ನಡೆಸಿದ್ದಾರೆ.

ಈ ವೇಳೆ ಶಂಕರ್ ನಾರಾಯಣ್ ಪೊದ್ದಾರ್ ನ ಚೆಕ್‌ – ಇನ್ ಬ್ಯಾಗೇಜ್‌ನಲ್ಲಿ ಸುಮಾರು 512 ಗ್ರಾಂ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿತ್ತು.‌ ತಕ್ಷಣ ಬೆಂಗಳೂರು ವಿಮಾನ ನಿಲ್ದಾಣದ‌ ಅಧಿಕಾರಿಗಳಿಗೆ ಮಾಹಿತಿ ರವಾನಿಸಿ, ಸಿಐಎಸ್ಎಫ್ ಸಿಬ್ಬಂದಿ ಪತ್ತೆಯಾದ ಗಾಂಜಾ ಸಹಿತ ಆರೋಪಿಯನ್ನು ಹೆಚ್ವಿನ ವಿಚಾರಣೆಗಾಗಿ ಬಜ್ಪೆ‌ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *