ಬೆಂಗಳೂರು: ಅಲ್ಯುಮಿನಿಯಂ ಪಾತ್ರೆಗಳನ್ನು ದೀರ್ಘಾವಧಿ ಬಳಸಿದರೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಹಿನ್ನಲೆಯಲ್ಲಿ ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಬಳಸಲಾಗುತ್ತಿದ್ದ ಅಲ್ಯುಮಿನಿಯಂ ಪಾತ್ರೆಗಳ ಬಳಕೆಗೆ ಕಡಿವಾಣ ಹಾಕಿದೆ.

ಮಧ್ಯಾಹ್ನದ ಉಪಾಹಾರ ಯೋಜನೆಯಡಿ ಅಲ್ಯುಮಿನಯಂ ಪಾತ್ರೆಗಳ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು ಎಂಬ ದೃಷ್ಟಿಯಿಂದ ಪಾತ್ರೆಗಳ ಬಳಕೆಯನ್ನು ಕಡಿಮೆ ಮಾಡುವಂತೆ ಕೇಂದ್ರ ಸರಕಾರ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ರಾಜ್ಯದ 9,337 ಶಾಲೆಗಳ ಅಡುಗೆ ಮನೆಗೆ ಆಧುನಿಕ ಅಡುಗೆ ಪರಿಕರಗಳನ್ನು ಖರೀದಿಸಲು 21.55 ಕೋ.ರೂ. ಅನುದಾನ ನೀಡಲು ರಾಜ್ಯ ಸರಕಾರ ಒಪ್ಪಿಗೆ ನೀಡಿದೆ.

ಶಾಲೆಗಳಲ್ಲಿ ಕಡ್ಡಾಯವಾಗಿ ಗುಣಮಟ್ಟದ ಉತ್ತಮ ಸ್ಟೈನ್‌ಲೆಸ್ ಸ್ಟೀಲ್ ಪಾತ್ರೆ ಪರಿಕರವನ್ನು ಮಾತ್ರ ಕೊಂಡುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಆರ್. ವಿ. ಶುಭಮಂಗಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




