Breaking
23 Mar 2026, Mon

ಮಾರಿಷಸ್ ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಕಾಲು ಜಾರಿ ಬಿದ್ದು ಸುಳ್ಯದ ಯುವಕ ಸಾವು

ಸುಳ್ಯ: ಮಾರಿಷಸ್ ನಲ್ಲಿ ಸುಳ್ಯದ ಮೂಲದ ಯುವಕನೋರ್ವ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಅ.13 ರಂದು ನಡೆದಿದೆ.

ಮೃತನನ್ನು ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ನಿವಾಸಿ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಎಂದು ಗುರುತಿಸಲಾಗಿದೆ.

ನಂದನ ಅವರು ಮಾರಿಷಸ್ ದೇಶದಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆಂಡ್ ಟೂರಿಸಂ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಕರೆತರಲು ವ್ಯವಸ್ಥೆ ಮಾಡುವಂತೆ ಮೃತ ಯುವಕನ ತಾಯಿಯ ತಮ್ಮ ಕಾರ್ಕಳದ ಸತ್ಯನಾರಾಯಣ ಭಟ್ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ ಅವರು ವಿದೇಶ ಸಚಿವ ಜೈಶಂಕರ್ ಅವರಿಗೆ ಮನವಿ ಮಾಡಿ ಪೂರಕ ಕ್ರಮಕ್ಕೆ ವಿನಂತಿಸಿದ್ದಾರೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರೂ ಕೂಡ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲು ಮನವಿ ಮಾಡಿದ್ದಾರೆ.

ನಂದನ ಅವರು ಮಾರಿಷಸ್ ನಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆಂಡ್ ಟೂರಿಸಂ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *