Breaking
25 Sep 2026, Fri

ಅಕ್ರಮ ಕೂಟ ಪ್ರಕರಣ: 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸುಳ್ಯ: ಅಕ್ರಮ ಕೂಟ ಪ್ರಕರಣದಲ್ಲಿ ಇಬ್ಬರ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಭಾಗಿಯಾಗಿದ್ದು 35 ವರ್ಷಗಳಿಂದ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಧಿತ ಆರೋಪಿಯನ್ನುಕೇರಳದ ತ್ರಿಶೂರ್ ಜಿಲ್ಲೆಯ ನಾಟಿ ಮನೆಯ ಬಾಲನ್ (73) ಎಂದು ಗುರುತಿಸಲಾಗಿದೆ.

1990ರಲ್ಲಿ ಸುಳ್ಯ ತಾಲ್ಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ನಡೆದ ಅಕ್ರಮ ಕೂಟ ಪ್ರಕರಣದಲ್ಲಿ ಶಾಂತಪ್ಪ ಮತ್ತು ಸುಬ್ಬಯ್ಯ ಎಂಬವರ ಮೇಲೆ ತಲ್ವಾರ್‌ನಿಂದ ದಾಳಿ ನಡೆಸಿ ತೀವ್ರ ರಕ್ತಗಾಯ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ 35 ವರ್ಷಗಳಿಂದ ತಲೆಮರೆಸಿಕೊಂಡಿದ್ದು ಇದೀಗ ಆರೋಪಿಯನ್ನು ಸುಳ್ಯ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *