Breaking
10 May 2026, Sun

ಮಂಜೇಶ್ವರದಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಇಬ್ಬರ ಬಂಧನ

ಕಾಸರಗೋಡು: ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಇಬ್ಬರು ವ್ಯಕ್ತಿಗಳನ್ನನ್ನು ಮಂಜೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಉದ್ಯಾವರ ಜಮಾಲುದ್ದೀನ್ ಫೈಝಲ್ ( 39) ಹಾಗು ಹೊಸಬೆಟ್ಟು ವಿನ ರಾಫಿಲ್ (45) ಎಂದು ಗುರುತಿಸಲಾಗಿದೆ.

ಕಳೆದ ಎರಡು ದಿನಗಳ ಹಿಂದೆ ಮಂಜೇಶ್ವರ ಗೋವಿಂದ ಪೈ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಇವರು ಮೊಬೈಲ್ ನಂಬರ್ ಗಳನ್ನು ನೀಡುವಂತೆ ಕಿರುಕುಳ ನೀಡಲು ಯತ್ನಿಸಿದ್ದರು ಎನ್ನಲಾಗಿದೆ. ಬಳಿಕ ವಿದ್ಯಾರ್ಥಿ ನಿಯರು ತಪ್ಪಿಸಿಕೊಂಡು ಮನೆಗೆ ತಲುಪಿದ್ದರು.

ಮಂಜೇಶ್ವರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *