Breaking
25 Jun 2026, Thu

ಬೈಕ್ ಸ್ಕಿಡ್: ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು

ಬಂಟ್ವಾಳ: ತುಂಬೆ ಸಮೀಪದ ರಾಮಲಕಟ್ಟೆ, ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಸವಾರನು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕನನ್ನು ಬಂಟ್ವಾಳ ಹೊಸ್ಮಾರು ನಿವಾಸಿ ಗೋಪಾಲ ಎಂಬವರ ಪುತ್ರ ಧನುಷ್ (23) ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆಯಿಂದ ಬಂಟ್ವಾಳದ ಹೊಸ್ಮಾರು ಮನೆಯ ಕಡೆಗೆ ತೆರಳುತ್ತಿದ್ದ ವೇಳೆ ತುಂಬೆ ಸಮೀಪದ ರಾಮಲಕಟ್ಟೆ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಧನುಷ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಬಂಟ್ವಾಳ ಟ್ರಾಫಿಕ್ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *