Breaking
26 Jun 2026, Fri

ಸಾಮಾಜಿಕ ಹೋರಾಟಗಾರ ಜಯಂತ್.ಟಿ ವಿರುದ್ಧ ಸುಮೊಟೊ ಪ್ರಕರಣ ದಾಖಲು

ಬೆಳ್ತಂಗಡಿ : ಸಾಮಾಜಿಕ ಹೋರಾಟಗಾರ ಜಯಂತ್.ಟಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.14 ರಂದು ಸುಮೊಟೊ ಪ್ರಕರಣ ದಾಖಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಮಾಡಿದ ಪ್ರಕರಣದ ಸಂಬಂಧ ಹೋರಾಟಗಾರ ಜಯಂತ್. ಟಿ ವಿಡಿಯೋ ಮೂಲಕ ಜನರಿಗೆ ತಪ್ಪು ಸಂದೇಶ ಪ್ರಸಾರ ಮಾಡಿದ್ದಕ್ಕೆ ಈ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬೆಳ್ತಂಗಡಿ ಪೊಲೀಸರ ಮನವಿ ಮೇರೆಗೆ ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಸೆ.18 ರಂದು ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು.

ಈ ಗಡಿಪಾರು ಆದೇಶ ಮಾಡಿದ ಅಂಶಗಳು ಸರಿಯಾಗಿದೆ ಎಂದು ಗೊತ್ತಿದ್ದರು ಜನರನ್ನು ಪ್ರಚೋದಿಸಲು ಸುಳ್ಳು ಮಾಹಿತಿಗಳ ಮೂಲಕ ಬಂಟ್ವಾಳ ಡಿವೈಎಸ್ಪಿ ಮತ್ತು ಪುತ್ತೂರು ಎಸಿ ಬಗ್ಗೆ ಹೋರಾಟಗಾರ ಜಯಂತ್ ಟಿ ಎಂಬವರು ತಪ್ಪು ಸಂದೇಶಗಳನ್ನು ವಿಡಿಯೋ ಮಾಡಿಪ್ರಸಾರ ಮಾಡಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *