Breaking
24 Mar 2026, Tue

ಮುದಂಗುರುಕಟ್ಟೆ ಬಸ್ ನಿಲ್ದಾಣದಲ್ಲಿ ವ್ಯಕ್ತಿ ಶವವಾಗಿ ಪತ್ತೆ

ಉಳ್ಳಾಲ: ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಮೃತದೇಹ ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮುದಂಗುರುಕಟ್ಟೆ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೃತರನ್ನು ಪಾತೂರು ಜುಮಾ ಮಸೀದಿ ಸಮೀಪದ ನಿವಾಸಿ ನಿಯಾಫ್ (28) ಎಂದು ಗುರುತಿಸಲಾಗಿದೆ.

ಮೃತನು ಅಸ್ವಾಭಾವಿಕವಾಗಿ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ತಜ್ಞರ ತಂಡಗಳಾದ ಸೊಕೊ ತಂಡ, ಶ್ವಾನದಳ ಮತ್ತು ಬೆರಳಚ್ಚು ತಂಡಕ್ಕೆ ಮಾಹಿತಿ ನೀಡಿದ್ದು, ತಂಡಗಳು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ನಿಯಾಫ್ ಅವರು ಅ.12 ರಂದು ಸಂಜೆ ಮನೆಯಿಂದ ಹೊರಟವರು ವಾಪಸು ಬಾರದೇ ನಾಪತ್ತೆಯಾಗಿದ್ದು ವರ್ಷದ ಹಿಂದೆ ಮಹಿಳೆಯ ಚಿನ್ನದ ಸರ ಕಿತ್ತು ನಾಪತ್ತೆಯಾದ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಿಂದ ಬಿಡುಗಡೆಗೊಂಡಿದ್ದರು ಎಂದು ತಿಳಿದು ಬಂದಿದೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *