ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

ಪಣಜಿ: ಗೋವಾದ ಕೃಷಿ ಸಚಿವ, ಮಾಜಿ ಮುಖ್ಯಮಂತ್ರಿ ರವಿ ನಾಯ್ಕ್(79) ಹೃದಯಸ್ತಂಭನದಿಂದ ನಿಧನರಾಗಿದ್ದಾರೆ.

ರವಿ ನಾಯ್ಕ್ ಅವರ ನಿವಾಸದಲ್ಲಿಯೇ ಅವರಿಗೆ ಹೃದಯಸ್ತಂಭನವಾಗಿದ್ದು, ಬಳಿಕ ಪೊಂಡಾ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಅವರು ನಿಧನರಾದರು ಎಂದು ತಿಳಿದುಬಂದಿದೆ.

ರವಿ ನಾಯ್ಕ್ ಎರಡು ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.1984ರಲ್ಲಿ ಮೊದಲ ಬಾರಿ ಗೋವಾ ವಿಧಾನಸಭೆಗೆ ಆಯ್ಕೆಯಾಗಿದ್ದರು. ಆರು ಬಾರಿ ಪೊಂಡಾ ಮತ್ತು ಒಂದು ಬಾರಿ ಮಾರ್ಕೈಮ್ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. ಮಹಾರಾಷ್ಟ್ರವಾದಿ ಗೋಮಂತಕ್ ಪಕ್ಷ, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ಪ್ರತಿನಿಧಿಸಿದ್ದರು.

ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *