ಬೆಂಗಳೂರು: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.18ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಅವಧಿಯಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಯಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಇರಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.





