Breaking
23 Mar 2026, Mon

ಬೀದರ್ ನಲ್ಲಿ 45 ಲಕ್ಷ ಮೌಲ್ಯದ ಮಾದಕ ವಸ್ತು ಸೀಜ್, ಇಬ್ಬರ ಬಂಧನ

ಬೀದರ್: ಜಿಲ್ಲೆಯಲ್ಲಿ ಪ್ರತ್ಯೇಕ ಕಡೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಮಾದಕ ವಸ್ತು ಸಹಿತ ಬಂಧಿಸಿ 45 ಲಕ್ಷ ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬೀದರ್ ನಗರದ ಕೆಇಬಿ ಫಂಕ್ಷನ್ ಹಾಲ್ ಬಳಿ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದ. ಈ ವೇಳೆ ಬೀದರ್ ಪೊಲೀಸರು ಖಚಿತ ಮಾಹಿತಿ ಮೇರೆಗೆ ಭರ್ಜರಿ ಕಾರ್ಯಾಚರಣೆ ನಡೆಸಿ, ಬರೋಬ್ಬರಿ 25 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಈ ವೇಳೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇನ್ನೂ ಬೀದರ್ ನಿಂದ ಮನ್ನಾಏಖೇಳಿಗೆ ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೋರ್ವ ಗಾಂಜಾ ಸಾಗಾಟ ಮಾಡುತ್ತಿದ್ದ. ಈ ವೇಳೆ ಪೊಲೀಸರು ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಮೀನಕೇರಾ ಕ್ರಾಸ್ ಬಳಿ ದಾಳಿ ನಡೆಸಿದ್ದು, 20 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಕುರಿತು ಗಾಂಧಿಗಂಜ್ ಮತ್ತು ಮನ್ನಾಏಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *