Breaking
23 Mar 2026, Mon

ತಾಯಿ ಹಾಸನಾಂಬೆ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನ: ಸಿಎಂ ಸಿದ್ದರಾಮಯ್ಯ ಅವರು ಇಂದು ಹಾಸನದ ಹಾಸನಾಂಬೆ ದೇವಿ ದರ್ಶನ ಪಡೆದರು.

ಜಿಲ್ಲಾಡಳಿತ ವ್ಯವಸ್ಥೆ ಮಾಡಿದ ಶಿಷ್ಟಾಚಾರದ ವಾಹನದಲ್ಲೇ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸ್ವಾಗತಿಸಿದರು.

ಕಳೆದ ಎರಡು ವರ್ಷಗಳಿಂದ ಸಿಎಂ ಸಿದ್ದರಾಮಯ್ಯ ದೇವಿ ದರ್ಶನ ಪಡೆಯುತ್ತಿದ್ದು, ಈ ಮೂಲಕ ಮೂರನೇ ಬಾರೀ ದೇವಿ ದರ್ಶನ ಪಡೆದುಕೊಂಡಿದ್ದಾರೆ. ದೇವಿ ದರ್ಶನ ಪಡೆದು ದರ್ಬಾರ್ ಗಣಪತಿ ಹಾಗೂ ಸಿದ್ದೇಶ್ವರಸ್ವಾಮಿ ದೇವರ ದರ್ಶನ ಪಡೆದುಕೊಂಡರು.

ಈ ವೇಳೆ ಮುಖ್ಯಮಂತ್ರಿಗಳಿಗೆ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಡಿಸಿ ಕೆ.ಎಸ್.ಲತಾಕುಮಾರಿ, ದಕ್ಷಿಣ ವಯಲ ಐಜಿಪಿ, ಬೋರಲಿಂಗಯ್ಯ ಎಸ್ಪಿ ಮಹಮದ್ ಸುಜೀತಾ ಸಾಥ್ ನೀಡಿದರು.

Leave a Reply

Your email address will not be published. Required fields are marked *