Breaking
25 Sep 2026, Fri

ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ, ಚಿಕ್ಕಮಗಳೂರಿನಲ್ಲಿ ಹಿಂದೂ ರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿ ಕ್ರೌರ್ಯ ಮೆರೆದಿರುವುದನ್ನು ವಿರೋಧಿಸಿ ಹಿಂದೂ ರಕ್ಷಣಾ ವೇದಿಕೆಯಿಂದ ಚಿಕ್ಕಮಗಳೂರಿನಲ್ಲಿ ಅ.15ರಂದು ಬೃಹತ್ ಪ್ರತಿಭಟನೆ ನಡೆಯಿತು.

ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಗೋವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು.

ನಗರದ ಕತ್ರಿಮಾರಮ್ಮ ದೇವಸ್ಥಾನದಿಂದ ಆರಂಭವಾಗಿ ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ವರೆಗೂ ಪ್ರತಿಭಟನಾ ಮೆರವಣಿಗೆ ಸಾಗಿ ಬಂತು.

ಗೋವಿನ ಬಾಲಕ್ಕೆ ಬೆಂಕಿ ಹಚ್ಚಿದ ಪ್ರಕರಣ, ಗೋ ಕಳ್ಳರ ಗಡಿಪಾರು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದು, ಸಿ.ಟಿ.ರವಿ, ಕೋಟಾ ಶ್ರೀನಿವಾಸ್ ಪೂಜಾರಿ, ಎಂ.ಕೆ.ಪ್ರಾಣೇಶ್ ನೂರಾರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದರು.

Leave a Reply

Your email address will not be published. Required fields are marked *