Breaking
24 Mar 2026, Tue

ಬೆಂಗಳೂರಿನ ಎಚ್‌ಎಎಲ್ ರಸ್ತೆಯ ಶಿವಲಿಂಗಯ್ಯ ಕಾಲೋನಿಯಲ್ಲಿ ವಾಟರ್ ಟ್ಯಾಂಕರ್ ಹರಿದು ಬಾಲಕಿ ಸಾವು

ಬೆಂಗಳೂರು: ವಾಟರ್ ಟ್ಯಾಂಕರ್ ಹರಿದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಬೆಂಗಳೂರಿನ ಎಚ್‌ಎಎಲ್ ರಸ್ತೆಯ ಶಿವಲಿಂಗಯ್ಯ ಕಾಲೋನಿಯಲ್ಲಿ ನಡೆದಿದೆ.

ಅನುಶ್ರೀ (9) ಸಾವನ್ನಪ್ಪಿದ ಬಾಲಕಿಯಾಗಿದ್ದು, ಬೆಳಗ್ಗೆ ಕಟ್ಟಡವೊಂದಕ್ಕೆ ವಾಟರ್ ಸಪ್ಲೈಗೆ ಟ್ಯಾಂಕರ್ ಬಂದಿತ್ತು.

ಈ ವೇಳೆ ಆಟ ಆಡುತ್ತಿದ್ದ ಅನುಶ್ರೀಗೆ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ವಾಸವಿದ್ದ ಕಲಬುರಗಿ ಮೂಲದ ದಂಪತಿಯ ಮಗಳು ಅನುಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಭೀಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *