Breaking
25 Sep 2026, Fri

ಕಾಪು ಮಾರಿಯಮ್ಮನ ದರ್ಶನ ಪಡೆದ ಕನ್ನಡ ಕಿರುತೆರೆ ನಟಿ ಕಾವ್ಯ ಶಾಸ್ತ್ರಿ

ಉಡುಪಿ: ಜಿಲ್ಲೆಯ ಕಾಪುವಿನಲ್ಲಿರುವ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕನ್ನಡ ಕಿರುತೆರೆ ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಕಾವ್ಯ ಶಾಸ್ತ್ರಿ ಅ.15ರಂದು ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು.

ಈ ವೇಳೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ಬಳಿಕ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ವತಿಯಿಂದ ನಟಿಯನ್ನು ಗೌರವಿಸಲಾಯಿತು.

ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ನವದುರ್ಗಾ ಲೇಖನ ಯಜ್ಞದ ಮಹಿಳಾ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್, ಪ್ರಚಾರ ಸಮಿತಿ ಸಂಚಾಲಕ ಜಯರಾಮ್ ಆಚಾರ್ಯ, ಬೆಂಗಳೂರು ಸಮಿತಿಯ ಗಿರೀಶ್ ಪೂಜಾರಿ, ರಾಜಣ್ಣ ಬೆಂಗಳೂರು ಹಾಗೂ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *