ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಮ್ಮ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತೇವೆ ಎಂದು ಇನ್ಫೋಸಿಸ್ ಮುಖ್ಯಸ್ಥರಾದ ಡಾ.ನಾರಾಯಣ ಮೂರ್ತಿ ಹಾಗೂ ಅವರ ಪತ್ನಿ ಸುಧಾಮೂರ್ತಿ ಹೇಳಿದ್ದಾರೆ.

ಈ ಕುರಿತು ಹಿಂದುಳಿದ ವರ್ಗಗಳ ಆಯೋಗಕ್ಕೆ ಪತ್ರ ಬರೆದಿದ್ದು ನಾವು ಹಿಂದುಳಿದ ಯಾವುದೇ ಜಾತಿಗೆ ಸೇರಿಲ್ಲ. ಹೀಗಾಗಿ ಈ ಸಮೀಕ್ಷೆ ಸರಕಾರಕ್ಕೆ ಉಪಯೋಗವಿಲ್ಲ. ನಮ್ಮ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುದಿಲ್ಲ. ನಮ್ಮ ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇವೆ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಸರಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸುವುದು ಅವರ ಇಚ್ಛೆಗೆ ಬಿಟ್ಟಿದ್ದಾಗಿದೆ ಎಂಬುದಾಗಿ ಆಯೋಗವು ಈಗಾಗಲೇ ಸ್ಪಷ್ಟನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಇವರು ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ ಅಂತ ಹೇಳಲಾಗುತ್ತಿದೆ.

ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ನಾವು ಯಾರಿಗೂ ಬಲವಂತ ಮಾಡುವುದಿಲ್ಲ. ಅವರ ಸ್ವಇಚ್ಛೆ ಎಂದು ತಿಳಿಸಿದ್ದಾರೆ.



