Breaking
23 Mar 2026, Mon

ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದ ಪಾಪಿ ಡಾಕ್ಟರ್ ಪತಿಯ ಕರಾಳ ಮುಖ ಬಯಲು ಮಾಡಿದ ನಾದಿನಿ

ಬೆಂಗಳೂರು: ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಸ್ತೇಶಿಯಾ ನೀಡಿ ಪತ್ನಿಯನ್ನು ಹತ್ಯೆಗೈದ ಪಾಪಿ ಪತಿಯ ಕರಾಳ ಮುಖ ನಾದಿನಿಯಿಂದ ಬಯಲಾಗಿದೆ.

ವೈದ್ಯ ಡಾ.ಕೃತಿಕಾ ಪತಿಯ ಕೈಯಿಂದ ಕೊಲೆಯಾದ ದುರ್ದೈವಿಯಾಗಿದ್ದು, ಪಾಪಿ ಪತಿ ಆರೋಪಿ ಡಾ.ಮಹೇಂದ್ರ ರೆಡ್ಡಿ ಎಂಬಾತ ಕೊಲೆ ಮಾಡಿ ಬಂಧನಕ್ಕೆ ಒಳಗಾಗಿದ್ದಾನೆ.

ಹೌದು ತನ್ನ ಬಾವನ ಕುಕೃತ್ಯವನ್ನು ನಾದಿನಿ ಮಾಧ್ಯಮದ ಮುಂದೆ ಬಿಚ್ಚಿಟ್ಟಿದ್ದು ಅಕ್ಕನ ಸಾವಿಗೆ ಪತಿ ಮಹೇಂದ್ರನೇ ಕಾರಣ. ಇದೊಂದು ಪೂರ್ವನಿಯೋಜಿತ ಕೊಲೆ ಎಂದು ಆರೋಪ ಮಾಡಿದ್ದಾರೆ.

ಕೃತಿಕಾ ಮೃತಪಟ್ಟ ದಿನವೇ ನಮಗೆ ಅನುಮಾನವಿತ್ತು. ಪೋಸ್ಟ್ಮಾರ್ಟಂ ಮಾಡಬೇಕು ಎಂದು ನಾವು ಒತ್ತಾಯ ಮಾಡಿದ್ದೆವು. ಆದರೆ ಮಹೇಂದ್ರ ಪೋಸ್ಟ್ಮಾರ್ಟಂ ಬೇಡ ಎಂದು ನಾಟಕ ಮಾಡಿದರು. ನಂತರ ತನಿಖೆಯ ವೇಳೆ ಮಹೇಂದ್ರಗೆ ಅನೈತಿಕ ಸಂಬಂಧವಿತ್ತು ಎಂದು ಗೊತ್ತಾಯಿತು ಎಂದು ನಿಖಿತಾ ಹೇಳಿದ್ದಾರೆ.

ಕೃತಿಕಾಗೆ ಯಾವುದೇ ಅನಾರೋಗ್ಯ ಸಮಸ್ಯೆ ಇರಲಿಲ್ಲ. ನಾನು ಆಕೆಯ ಅಕ್ಕ. ನನಗೆ ಎಲ್ಲಾ ಗೊತ್ತು. ಮಹೇಂದ್ರನನ್ನು ಸ್ವಂತ ಮಗನ ರೀತಿ ನಮ್ಮ ಅಪ್ಪ ಅಮ್ಮ ನೋಡಿಕೊಳ್ಳುತ್ತಿದ್ದರು. ನಾವಿಬ್ಬರು ಹೆಣ್ಣು ಮಕ್ಕಳು ಆಗಿರುವುದರಿಂದ ಆತನನ್ನೇ ಮಗ ಎನ್ನುವ ರೀತಿ ನಡೆದುಕೊಳ್ಳುತ್ತಿದ್ದರು.

ಮೊದಲಿಗೆ ಕ್ಲಿನಿಕ್ ಮಾಡಿಕೊಡುವಂತೆ ಮಹೇಂದ್ರ ಒತ್ತಾಯ ಮಾಡಿದ್ದ. ಮದುವೆ ನಂತರ ಹಾಸ್ಪಿಟಲ್ ಮಾಡಿ ಕೊಡಿ ಎಂದಿದ್ದ. ಅಷ್ಟೆಲ್ಲ ಆಗಲ್ಲಪ್ಪ, ಕ್ಲಿನಿಕ್ ಮಾಡಿಕೊಡುತ್ತೇವೆ ಎಂದು ತಂದೆ ಹೇಳಿದ್ದರು. ಹಾಸ್ಪಿಟಲ್ ಮಾಡಿಕೊಟ್ಟಿಲ್ಲ ಎನ್ನುವ ಕಾರಣ ಕೂಡಾ ಇರಬಹುದು ಎಂದು ನಿಖಿತಾ ಹೇಳಿದ್ದಾರೆ.

Leave a Reply

Your email address will not be published. Required fields are marked *