Breaking
23 Mar 2026, Mon

ಅ.26 ಬಿ.ಸಿ.ರೋಡಿನ ಪೊಸಳ್ಳಿ ಕುಲಾಲ ಭವನದಲ್ಲಿ ‘ಯುವ ಪ್ರೇರಣೆ – 2025’ ಕಾರ್ಯಕ್ರಮ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ.) ವತಿಯಿಂದ ‘ಯುವ ಪ್ರೇರಣೆ – 2025ʼ ಬ್ಯಾಂಕಿಂಗ್ ಸಾಲ ಮತ್ತು ಸ್ವಉದ್ಯೋಗ ಮಾಹಿತಿ ಕಾರ್ಯಾಗಾರವು ಬಿ.ಸಿ.ರೋಡಿನ ಪೊಸಳ್ಳಿ ಕುಲಾಲ ಭವನದಲ್ಲಿ ಅ. 26ರಂದು ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಬ್ಯಾಂಕ್ ಬಿ.ಸಿ.ರೋಡು ಶಾಖೆಯ ಸೀನಿಯರ್ ಬ್ರಾಂಚ್ ಮೆನೇಜರ್ ಪುರಂದರ, ಉದ್ಯಮಿ ಎಸ್. ಗಂಗಾಧರ, ಸಮಾಜ ಸೇವಾ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕ ಭೋಜ ಮೂಲ್ಯ ಆಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಿರಂತರ ವಿದ್ಯಾರ್ಥಿ ವೇತನ ಮತ್ತು ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ. ಹಾಗೂ ಏಷ್ಯನ್ ಢೆಪ್ ರಾಪಿಡ್ ಟೀಮ್ ಚೆಸ್ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ ಗಳಿಸಿರುವ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕು| ಯಶಸ್ವಿ ಕುಲಾಲ್ ರವರಿಗೆ ಸನ್ಮಾನ ನಡೆಯಲಿದೆ.

ತಾಲೂಕು ಸಂಘದ ಅಧ್ಯಕ್ಷ ಬಿ. ರಮೇಶ್ ಸಾಲ್ಯಾನ್ ಸಂಚಯಗಿರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಾಸಿಕ್ ಹೊಟೇಲ್ ಉದ್ಯಮಿ ಗಣೇಶ ಭಂಡಾರಿಬೆಟ್ಟು, ಕೊಡುಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಜಿಲ್ಲಾಧ್ಯಕ್ಷ ಕೆ. ಕುಶಾಲಪ್ಪ ಮೂಲ್ಯ, ಪದ್ಮಿನಿದೇವಣ್ಣ ಮಂಗಳೂರು, ಕುಲಾಲಕುಂಬಾರ ಯುವವೇದಿಕೆಯ ಜಿಲ್ಲಾಧ್ಯಕ್ಷ ಅನಿಲ್‌ದಾಸ್, ಉಡುಪಿ ಉದ್ಯಮಿ ದಯಾಯೋಗೀಶ್, ಸಿದ್ದಕಟ್ಟೆ ಪದವಿ ಕಾಲೇಜಿನ ಉಪನ್ಯಾಸಕ ಡಾ| ಅಭಿನಂದನ್ ಕುಲಾಲ್, ನೆಲ್ಯಾಡಿ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನ ಪ್ರಾಧ್ಯಾಪಕ ಆನಂದ್ ಎಂ. ಕಿದೂರು, ಹಿರಿಯ ವರದಿಗಾರ ವಿನೋದ್ ಪುದು, ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಬಬಿತಾಗಣೇಶ್, ಸಿಂಡಿಕೇಟ್ ಪ್ರಾಧಿಕಾರ ಮಂಗಳೂರು ವಿಶ್ವವಿದ್ಯಾನಿಲಯ ಸದಸ್ಯ ಸುರೇಶ್ ಕುಮಾರ್ ಬಿ. ನಾವೂರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಲಾಲ ಸೇವಾದಳದ ಚೈತನ್ಯ ಮಕ್ಕಳಿಂದ ‘ಮಕ್ಕಳ ರಾಜ್ಯ’ ನವ್ಯ ರಂಗ ನಾಟಕ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಯಾದವ ಕುಲಾಲ್ ಅಗ್ರಬೈಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *