Breaking
26 Sep 2026, Sat

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

ಬಂಟ್ವಾಳ: 20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸಜಿಪ ಮೂಡ ಗ್ರಾಮದ ನಿವಾಸಿ ಫಾರೂಕ್ಉಮ್ಮರ್ ಫಾರೂಕ್ (36) ಎಂದು ಗುರುತಿಸಲಾಗಿದೆ.

ಈತನನ್ನು ಬಂಟ್ವಾಳ ತಾಲೂಕಿನ ಮದ್ವ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ,ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಉಪ್ಪಿನಂಗಡಿ, ಕಡಬ, ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೋಣಾಜೆ, ಬರ್ಕೆ, ಬಜಪೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *