Breaking
26 Sep 2026, Sat

ಯಕ್ಷಗಾನದ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

ಬೆಳ್ತಂಗಡಿ: ಯಕ್ಷಗಾನದ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ (68 ) ನಿಧನರಾಗಿದ್ದಾರೆ.

ಅಲ್ಪಕಾಲದ ಅಸೌಖ್ಯದಿಂದ ಕನ್ಯಾಡಿಯಲ್ಲಿರುವ ತಮ್ಮ ಪುತ್ರಿಯ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಹೊಸ್ತೋಟ ಎಂಬಲ್ಲಿ ಕೃಷಿ ಚಟುವಟಿಕೆಗಳೊಂದಿಗೆ ಮನೆ ಮಾಡಿಕೊಂಡಿದ್ದರು. ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಕನಾ೯ಟಕ ಯಕ್ಷಗಾನ ಮೇಳ ಸೇರಿದಂತೆ ಹಲವು ಪ್ರಖ್ಯಾತ ಮೇಳಗಳಲ್ಲಿ ದಿನೇಶ್ ಅಮ್ಮಣ್ಣಾಯ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *