ಪುತ್ತೂರು: ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ, ವೈದ್ಯರ ಕೊರತೆ ಇದ್ದು ಅದನ್ನು ಪರಿಹಾರ ಮಾಡುವಂತೆ ಪುತ್ತೂರು ಶಾಸಕ ಅಶೋಕ್ ರೈಯವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗೆ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸಚಿವರನ್ನು ಭೇಟಿಯಾದ ಶಾಸಕರು ವಿಟ್ಲ ಸಮುದಾಯ ಕೇಂದ್ರದಲ್ಲಿ ಕಳೆದ ಹಲವು ವರ್ಷಗಳಿಂದ ಈ ಸಮಸ್ಯೆ ಇದೆ. ಅಲ್ಲಿ ವೈದ್ಯರ ಕೊರತೆಯಿಂದ ಜನರಿಗೆ ಸಂಕಷ್ಟ ಉಂಟಾಗಿದೆ.

ವಿಟ್ಲದಲ್ಲಿ ಬೇರೆ ಯಾವುದೇ ಆಸ್ಪತ್ರೆ ಇಲ್ಲದ ಕಾರಣ ತುರ್ತು ಸಂಧರ್ಭದಲ್ಲಿ ತೀವ್ರ ತೊಂದರೆಯನ್ನು ಅನುಭವಿಸಬೇಕಾಗಿ ಬಂದಿದೆ. ಜೊತೆಗೆ ಸಿಬ್ಬಂದಿಗಳ ಕೊರತೆಯೂ ಇದೆ. ತಕ್ಷಣ ಈ ಬಗ್ಗೆ ಮುತುವರ್ಜಿ ವಹಿಸಿ ಎಂದರು.

ಇದೇ ವೇಳೆ ಡಯಾಲಿಸಿಸ್ ಕೇಂದ್ರಕ್ಕೆ ಮನವಿ ಮಾಡಿದ್ದು ಶಾಸಕ ಅಶೋಕ್ ರೈಗಳು ಮನವಿ ಮಾಡಿದ್ದು ಸಚಿವರು ಸ್ಪಂದಿಸಿದ್ದು ಶೀಘ್ರ ಕ್ರಮಕ್ಕೆ ಸೂಚನೆಯನ್ನು ನೀಡಿದ್ದಾರೆ ಎನ್ನಲಾಗಿದೆ.



