Breaking
12 Aug 2026, Wed

ಉಡುಪಿಯ ಹಾಜೀ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿವೇಶನದಲ್ಲಿ ಕಸ ತ್ಯಾಜ್ಯಗಳ ರಾಶಿ

ಉಡುಪಿ: ಜಿಲ್ಲೆಯ ಹಾಜೀ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿವೇಶನದಲ್ಲಿ ಕಸ ತ್ಯಾಜ್ಯಗಳ ರಾಶಿ ಹಾಕಲಾಗಿದ್ದು, ಪರಿಣಾಮ ಪರಿಸರದಲ್ಲಿ ಗಬ್ಬು ವಾಸನೆ ಹೊಡೆಯುತ್ತಿದ್ದು ಮೂಗಿಗೆ ಕೈ ಹಿಡಿದು ನಡೆದಾಡುವ ಪರಿಸ್ಥಿತಿ ಎದುರಾಗಿದೆ.

ಇದರಿಂದ ಸಾರ್ವಜನಿಕರಿಗೆ ಸಾಂಕ್ರಮಿಕ ರೋಗಗಳು ಹರಡುವ ಭೀತಿ ಉಂಟಾಗಿದೆ.

ಈ ಕುರಿತು ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಪ್ರತಿಕ್ರಿಯೆ ನೀಡಿದ್ದು ಸ್ಥಳದಲ್ಲಿ ಹಸಿ ತ್ಯಾಜ್ಯ, ಕಟ್ಟಡ ನಿರ್ಮಾಣದ ತ್ಯಾಜ್ಯಗಳು, ತುಂಬಿಕೊಂಡಿವೆ. ತ್ಯಾಜ್ಯ ಎಸೆಯಲು ಸರಕಾರಿ ಸ್ಥಳವನ್ನು ಬಳಸಿಕೊಂಡಿದ್ದು, ನಿವೇಶನದ ತಡೆಬೇಲಿಯನ್ನು ತೆರವುಗೊಳಿಸಲಾಗಿದೆ. ತಕ್ಷಣ ನಗರಸಭೆ, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *