Breaking
25 Sep 2026, Fri

ಮಲ್ಪೆ ಸೀ ವಾಕ್ ಬಳಿ ಅಪರಿಚಿತ ಗಂಡಸಿನ ಶವ ಪತ್ತೆ

ಉಡುಪಿ: ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾದ ಘಟನೆ ಉಡುಪಿಯ ಮಲ್ಪೆ ಸೀ ವಾಕ್ ಬಳಿ ಅ.16 ರಂದು ನಡೆದಿದೆ.

ಮೃತನನ್ನು ಬಂದರಿನಲ್ಲಿ ಮೀನು ಹೊರುವ ಕೆಲಸಗಾರ ಮಹೇಶ್ ನಾಯ್ಕ್ ಎಂದು ಗುರುತಿಸಲಾಗಿದೆ.

ಮಲ್ಪೆ ಪೊಲೀಸರು ಸಮಾಜಸೇವಕ ನಿತ್ಯಾನಂದ ಒಳಕಾಡುವರ ನೆರವು ಪಡೆದು, ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಟ್ಟಿದ್ದು, ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಮಲ್ಪೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಮಲ್ಪೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *