Breaking
23 Mar 2026, Mon

ಕೌಟುಂಬಿಕ ಕಲಹದಿಂದ ಪತ್ನಿಯನ್ನೇ ಮಾರಕಾಸ್ತ್ರದಿಂದ ಕೊಚ್ಚಿ ಕೊಂದ ಪತಿ

ಚಿಕ್ಕಮಗಳೂರು: ಪತಿಯೊರ್ವ ತನ್ನ ಪತ್ನಿಯನ್ನೇ ಮಾರಕಾಸ್ತ್ರದಿಂದ ಕೊಚ್ಚಿ ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ಅ.15 ನಡೆದಿದೆ.

ತನು (25) ಗಂಡನಿಂದ ಕೊಲೆಯಾದ ಮಹಿಳೆಯಾಗಿದ್ದು ರಮೇಶ್ ಕೊಲೆಗೈದ ಆರೋಪಿ ಪತಿಯಾಗಿದ್ದಾನೆ.

ಕಳೆದ ಏಳು ವರ್ಷದ ಹಿಂದೆ ತನು ಮತ್ತು ರಮೇಶ್ ಗೆ ಮದುವೆಯಾಗಿದ್ದು ದಂಪತಿಗೆ ಆರು ವರ್ಷದ ಗಂಡು ಮಗನಿದ್ದಾನೆ. ಗಂಡನ ಜೊತೆ ಜಗಳವಾಡಿ ಕಳೆದ ಎರಡು ವರ್ಷಗಳಿಂದ ಪತ್ನಿ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದಳು.

ಅದರಂತೆ ಬುಧವಾರ ರಾತ್ರಿ ಕುಡಿದ ಮತ್ತಿನಲ್ಲಿ ಪತಿ ರಮೇಶ ತನ್ನ ಪತ್ನಿಯ ಮನೆಗೆ ಬಂದಿದ್ದು ಈ ವೇಳೆ ಇಬ್ಬರ ನಡುವೆ ಜಗಳ ಉಂಟಾಗಿ ರಮೇಶ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *