ಬಂಟ್ವಾಳ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪ ನಡು ವರ್ಷಾವಧಿ ಜಾತ್ರಾ ಮಹೋತ್ಸವವು ನ. 26 ಬುಧವಾರದಂದು ಬ್ರಹ್ಮಶ್ರೀ ನಿಲೇಶ್ವರ ಕೆ ಉಚ್ಚಿಲತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಈ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ತಂಡಗಳಿಂದ ಭಜನೆ ಹಾಗೂ ಅನ್ನದಾನ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದ್ದು ಇದರ ಆಮಂತ್ರಣ ಪತ್ರವನ್ನು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಅವರು ಶ್ರೀದೇವರ ರಂಗ ಪೂಜೆಯ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು.

ಜಾತ್ರಾ ಮಹೋತ್ಸವ ಊರ ಪರ ಊರ ಭಕ್ತರ ನೆರವಿನೊಂದಿಗೆ ದೇವರ ಅನುಗ್ರಹದಿಂದ ಯಶಸ್ವಿಯಾಗಿ ಜರುಗಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ ,ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಕೆ ರಾಧಾ ಕೃಷ್ಣ ಆಳ್ವ ,ಸುಧಾಕರ. ಕೇ .ಟಿ. ಕಿಶನ್ ಶೇಣವ,ಸೋಮನಾಥ ,ಸುಭಾಷ್ ಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




