Breaking
23 Dec 2024, Mon

ಪ್ರಲ್ಹಾದ್ ಜೋಶಿ ರಾಜೀನಾಮೆಗೆ ಆಗ್ರಹ: ಕಾರಣವೇನು?

ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯರ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಸಚಿವ ಪ್ರಲ್ಹಾದ್ ಜೋಶಿಯವರ ರಾಜೀನಾಮೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ಮಾಜಿ ಶಾಸಕ ದೇವಾನಂದ ಚೌಹಾಣ್ ಗೌರವಯುತವಾದ ವ್ಯಕ್ತಿ. ಚೌಹಾಣ್ ಅವರಿಗೆ ಲೋಕಸಭೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಜೋಶಿಯವರ ಸಹೋದರ ಗೋಪಾಲ್ ಜೋಶಿ 2 ಕೋಟಿ ಹಣ ಪಡೆದು ವಂಚಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೇನಾನಂದ ಚೌಹಾಣ್ ಅವರು ದಾಖಲೆ ಕೊಟ್ಟಿದ್ದಾರೆ. ಅಮಿತ್ ಶಾ ಅವರ ಹೆಸರನ್ನ ಬಳಸಿಕೊಳ್ಳಾಗಿದೆ. ಪ್ರಲ್ಹಾದ್ ಜೋಶಿಯವರ ಪ್ರಭಾವ ಬಳಿಸಿಕೊಂಡು ವಂಚಿಸಲಾಗಿದೆ.

ಇಡಿ, ಐಟಿಯವರನ್ನ ಚೂ ಬಿಟ್ಟು ಹೆದರಿಸಿ ದೇವಾನಂದ ಚೌಹಾಣ್ ಅವರನ್ನ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಟಿಕೆಟ್ ಕೊಡಿಸುವುದಾಗಿ ಹೇಳಿ 2 ಕೋಟಿ ಹಣ ಪಡೆದು ವಂಚಿಸಿರುವುದು ಇದೀಗ ಬೆಳಕಿಗೆ ಬಂದಿದೆ. ಗೋಪಾಲ್ ಜೋಶಿಯವರು ಆರ್.ಎಸ್.ಎಸ್ ನಲ್ಲಿ ತೊಡಗಿಸಿಕೊಂಡವರು. ಆರ್.ಎಸ್.ಎಸ್ ನ ಕೆಲ ನಾಯಕರು ಈ ರೀತಿಯ ಟಿಕೆಟ್ ದಂಧೆಯಲ್ಲಿ ತೊಡಗಿರುವ ಬಗ್ಗೆ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Leave a Reply

Your email address will not be published. Required fields are marked *