Breaking
25 Sep 2026, Fri

ಉಡುಪಿಯ ಅಂಬಲಪಾಡಿಯಲ್ಲಿ ಪ್ರೇಮಿಗಳು ನೇಣಿಗೆ ಶರಣು

ಉಡುಪಿ: ಪ್ರೇಮಿಗಳಿಬ್ಬರು ಚೂಡಿದಾರದ ವೇಲಿನಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಅ.16 ರಂದು ಸಂಜೆ ನಡೆದಿದೆ.

ಮೃತರನ್ನು ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ ಪವಿತ್ರ (17), ಯುವಕ ವಲಸೆ ಕಾರ್ಮಿಕ ಮಲ್ಲೇಶ (23) ಗುರುತಿಸಲಾಗಿದೆ.

ಸಮಾಜಸೇವಕ ನಿತ್ಯಾನಂದ ಒಳಕಾಡು ಎರಡು ಮೃತದೇಹಗಳನ್ನು ನೇಣುಕುಣಿಕೆಯಿಂದ ತೆರವುಗೊಳಿಸಿ ಅಂಬುಲೆನ್ಸ್ ವಾಹನದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ಪೊಲೀಸ್ ಇಲಾಖೆಗೆ ನೆರವು ನೀಡಿದರು.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *