ಮಂಗಳೂರು: ಪಿಲಿಕುಳ ನಿಸರ್ಗಧಾಮದ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷವಿರುವ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಲೋಕಾಯುಕ್ತ ತಂಡವು ಅ.16 ರಂದು ದಾಳಿ ನಡೆಸಿದೆ.
ಮೃಗಾಲಯದ ನಿರ್ವಹಣೆಯಲ್ಲಿ ಲೋಪದೋಷಗಳು, ಅನುದಾನದ ದುರುಪಯೋಗ , ಟೆಂಡರ್‌ಪ್ರಕ್ರಿಯೆಯಲ್ಲಿ ಲೋಪ, ಮೃಗಾಲಯದ ಪ್ರಾಣಿಗಳ ಆಹಾರ ಸರಬರಾಜಿನಲ್ಲಿ ಅವ್ಯವಹಾರ ಆರೋಪಗಳ ಹಿನ್ನೆಲೆಯಲ್ಲಿ ಆದಾಯ ಮತ್ತು ವೆಚ್ಚದ ಬಗ್ಗೆ ಲೋಕಾಯುಕ್ತ ಮಂಗಳೂರು ವಿಭಾಗದ ಡಿವೈಎಸ್ ಪಿ ಡಾ. ಗಾನಾ ಪಿ. ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದೆ.

ಇದಕ್ಕೂ ಮೊದಲು ಮೇ 23ರಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಕಚೇರಿಗೆ ದಿಢೀರ್‌ಭೇಟಿ ನೀಡಿ ಪರಿಶೋಧನೆ ನಡೆಸಿದ್ದರು. ಆ ಸಮಯದ ವರದಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಲಾಗಿದ್ದು, ಕೇಂದ್ರದ ಸೂಚನೆ ಮೇರೆಗೆ ಸರ್ಚ್ ವಾರಂಟ್ ಪಡೆದು ಮತ್ತೊಮ್ಮೆ ದಾಳಿ ನಡೆಸಲಾಗಿದೆ.

ಸಮಗ್ರವಾಗಿ ತನಿಖೆಗಾಗಿ ಇನ್ನೂ ಎರಡು ದಿನ ಕಾರ್ಯಚರಣೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಲೋಕಾಯುಕ್ತ ಎಸ್.ಪಿ. ಕುಮಾರ ಚಂದ್ರ ತಿಳಿಸಿದ್ದಾರೆ.




