ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿಯೊಬ್ಬರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಶವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆ ನಿವಾಸಿ ಶಂಭು ಪೂಜಾರಿ (80) ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ. ಇವರು ಅ. 9 ರಂದು ಮಧ್ಯಾಹ್ನ 1.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಸಪೂರ ಶರೀರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಪೊಲೀಸ್ ಉಪನಿರೀಕ್ಷಕರು ಮೊ.ನಂ: 9080805445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.



